Ticker

6/recent/ticker-posts

ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮ ದಿನ

ಇಂದು ಗಾಂಧಿ ಜಯಂತಿ. ಹಾಗೆಯೇ ಸರಳ,ಸಜ್ಜನ, ಸನ್ನಡತೆಯ ಮಹಾಪುರುಷ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮ ದಿನವು ಸಹ ಇಂದು.

ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ, ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು. ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.

ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”

“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ ಪ್ರತಿಕ್ರಿಯೆ..!!

“ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾರೆ..

“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು”

ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ ಮಾಡಿದರು.ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.

ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.

“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ ನಿಭಾಯಿಸುತ್ತಿದ್ದರು.

ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.

ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು ಹಣವೆಲ್ಲಿದೆ..? ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” ಎಂದಿದ್ದರು.

ಲಾಲ್ ಬಹದ್ದೂರ್ ಶಾಸ್ತ್ರೀಯವರು ಅಕ್ಟೋಬರ್ ೨, ೧೯೦೪ ರಲ್ಲಿ ವಾರಣಾಸಿಯ ರಾಮನಗರದಲ್ಲಿ ಜನಿಸಿದರು. ತಂದೆ ಶಾರದಾ ಪ್ರಸಾದ್ ಶ್ರೀವಾಸ್ತವ ಹಾಗು ತಾಯಿ ರಾಮ್ ದುಲಾರಿ ದೇವಿ. ಕೈಲಾಶ ದೇವಿ ಶಾಸ್ತ್ರೀಯವರ ಅಕ್ಕ.

೧೯೬೪ ರಲ್ಲಿ ಭಾರತದ  ಪ್ರಧಾನಿ ಯಾದ  ಲಾಲ್ ಬಹದ್ದೂರ್ ಶಾಸ್ತ್ರೀಯವರು ಭಾರತದ ಆರ್ಥಿಕತೆ , ವಿದೇಶಾಂಗ ನೀತಿ ಯಲ್ಲಿ ಗಣನೀಯ ಸುಧಾರಣೆಗಳನ್ನು ಮಾಡಿದರು. ೧೯೬೫ ರ ಪಾಕಿಸ್ತಾನದ ವಿರುದ್ದದ ಯುದ್ದದಲ್ಲಿ ಭಾರತ ಜಯಗಲಿಸಿದಲ್ಲಿ ಶಾಸ್ತ್ರಿಯವರ ಪಾತ್ರ ಮುಖ್ಯವಾದದ್ದು . ಮೇಲೆ ನೀಡಿರುವ ಘಟನೆಗಳು ನಡೆದದ್ದು ಈ ಯುದ್ದದ ಸಂಧರ್ಬದಲ್ಲೇ .

೧೯೬೬ ರ ಜನವರಿ ೧೧ ರಂದು ಸೋವಿಯೆತ್ ಯೂನಿಯನ್ ನ, ತಾಷ್ಕೆಂಟ್ ನಲ್ಲಿ ಕೊನೆಯುಸಿರೆಳೆದ ಶಾತ್ರಿಯವರ ಸಾವು ಇನ್ನು ನಿಗೂಡ ವಾಗಿಯೇ ಉಳಿದಿದೆ .

ಜೈ ಜವಾನ್ . ಜೈ ಕಿಶನ್.  ಎಂದು ಹೇಳಿದ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜೀವನ ನಮ್ಮೆಲ್ಲರಿಗೂ ಆದರ್ಶವಾಗಿದೆ .
ಜೈ ಲಾಲ್ ಬಹದ್ದೂರ್ ಶಾಸ್ತ್ರೀ

Post a Comment

0 Comments