Ticker

6/recent/ticker-posts

ಸಾಹಿತಿ ಕೆ.ವಿ ತಿರುಮಲೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್‌ [K.V Thirumalesh] ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಿರುಮಲೇಶ್ ಅವರ ಅಕ್ಷಯ ಕಾವ್ಯ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, 1 ಲಕ್ಷ ರೂ. ನಗದು, ಶಾಲು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿರಲಿದೆ. 2017ರ ಫೆ.16ರಂದು ನಡೆಯಲಿರುವ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. 

ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಪ್ರಸಾದ್ ತಿವಾರಿ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಸಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಕೆ.ಶ್ರೀನಿವಾಸರಾವ್ ತಿಳಿಸಿದ್ದಾರೆ.

‘ಅಕ್ಷಯ ಕಾವ್ಯ’ ತಿರುಮಲೇಶ್‌ ಅವರ ಮಹತ್ವಾಕಾಂಕ್ಷೆಯ ಕೃತಿಯಾಗಿದ್ದು, ಇದು ‘ಆಧುನಿಕ ಮಹಾಕಾವ್ಯ’ದ ವಿಸ್ತಾರವನ್ನು ಒಳಗೊಂಡಿದೆ. ಲೋಕದ ಅನುಭವಗಳನ್ನು ಗಂಡು ಹೆಣ್ಣಿನ ರೂಪಕಗಳ ಮೂಲಕ ಗ್ರಹಿಸುವ ಪ್ರಯತ್ನ ಹಾಗೂ ಬೇರೆ ಬೇರೆ ಲಯಗಳು ಬಳಕೆಯಾಗಿರುವ ವಿಶಿಷ್ಟ ಕಾವ್ಯಪ್ರಯೋಗ ಇದಾಗಿದೆ.

ಮೂಲತಃ ಕಾಸರಗೋಡಿನವರಾದ ತಿರುಮಲೇಶ್,೧೯೪೦ರಲ್ಲಿ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ ಜನಿಸಿದರು. ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ವಠಾರ, ಮುಖವಾಡಗಳು ಇವರ ಮುಖ್ಯ ಕವನ ಸಂಕಲನಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳಾಗಿವೆ. 


Post a Comment

0 Comments