ನೀ ಹೀಂಗ ನೋಡಬ್ಯಾಡ ನನ್ನ - ದ. ರಾ. ಬೇಂದ್ರೆ [Nee Hinga Nodabyada Nanna Song Lyrics in Kannada]
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು ಯಾಕ ನೋಡತೀ ಮತ್ತ ಮತ್ತ ಇತ್ತ?
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು ಯಾಕ ನೋಡತೀ ಮತ್ತ ಮತ್ತ ಇತ್ತ?
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ತಂಬಲ ಹಾಕದ ತುಂಬ ಕೆಂಪು ಗಿಡಗಡಕಹಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ ಹೀಂಗ
ಈ ಗದ್ದ ಗಲ್ಲ ಹಣಿ ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನ ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ ಹೀಂಗ
ಈ ಗದ್ದ ಗಲ್ಲ ಹಣಿ ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನ ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ಧಾರೀಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನ
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನ
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ
ಹೊಳೆ ಹೊಳೆವ ಹಾಂಗ ಕಣ್ಣಿರುವ ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
ನೀ ಹೀಂಗ ನೋಡಿದರ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ
0 Comments
Comment is awaiting for approval