ಸಾಕು ಸಾಕು ಮನುಜಸೇವೆಯು ರಂಗಯ್ಯ - ಕನಕದಾಸರು [Saku Saku Manuja Seveyu Song Lyrics in Kannada]
ಸಾಕು ಸಾಕು ಮನುಜಸೇವೆಯು, ರಂಗಯ್ಯ ಇನ್ನು
ಸಾಕು ಸಾಕು ಮನುಜಸೇವೆ ಮಾಡಿ ದಣಿದು ನೊಂದೆ ನಾನು|
ಬೇಕು ನಿನ್ನ ಪಾದಭಜನೆ ಕೊಟ್ಟು ಸಲಹೊ ರಂಗಯ್ಯ
ಬೇಕು ನಿನ್ನ ಪಾದಭಜನೆ ಕೊಟ್ಟು ಸಲಹೊ ರಂಗಯ್ಯ
ಹೊತ್ತರೆದ್ದು ಹೋಗಿ ಪರರ ಚಿತ್ತವೃತ್ತಿಯನ್ನು ತಿಳಿದು
ಹತ್ತರಿದ್ದು ಹಲವು ಕೆಲಸ ಭೃತ್ಯನಂತೆ ಮಾಡಿ
ರಿಕ್ತಹಸ್ತದಿಂದ ಮನೆಯ ಸೇರುವೆ
ಆಸೆಗಾಗಿಮತ್ತೆ ಕಂಡ ಕಡೆಗೆ ತೊಲಗುವೆ
ಬಂದು ಅಪರರಾತ್ರಿಯಲ್ಲಿ ತಿಂದು ಒರಗುವೆ ರಂಗಯ್ಯ ರಂಗ
ಹತ್ತರಿದ್ದು ಹಲವು ಕೆಲಸ ಭೃತ್ಯನಂತೆ ಮಾಡಿ
ರಿಕ್ತಹಸ್ತದಿಂದ ಮನೆಯ ಸೇರುವೆ
ಆಸೆಗಾಗಿಮತ್ತೆ ಕಂಡ ಕಡೆಗೆ ತೊಲಗುವೆ
ಬಂದು ಅಪರರಾತ್ರಿಯಲ್ಲಿ ತಿಂದು ಒರಗುವೆ ರಂಗಯ್ಯ ರಂಗ
ಸ್ನಾನ ಸಂಧ್ಯಾನುಷ್ಠಾನ ನೇಮವೆಲ್ಲ ತೊರೆದು
ಬಿಟ್ಟುಹೀನನಾಗಿ ಕೆಟ್ಟ ಜನರ ಮನೆಗಳನ್ನು ತಿರುಗಿ
ತಿರುಗಿಶ್ವಾನನಂತೆ ದಿನವ ಕಳೆವೆನೊ
ದುರಾಸೆಯನ್ನುಮನಸಿನಲ್ಲಿ ಮಡಗಿಕೊಂಡು
ಕುದಿವೆನೊಕೊನೆಗೂ ಎಳ್ಳುಕಾಳಿನಷ್ಟು ಸುಖವ ಕಾಣೆನೊ ರಂಗಯ್ಯ ರಂಗ
ಬಿಟ್ಟುಹೀನನಾಗಿ ಕೆಟ್ಟ ಜನರ ಮನೆಗಳನ್ನು ತಿರುಗಿ
ತಿರುಗಿಶ್ವಾನನಂತೆ ದಿನವ ಕಳೆವೆನೊ
ದುರಾಸೆಯನ್ನುಮನಸಿನಲ್ಲಿ ಮಡಗಿಕೊಂಡು
ಕುದಿವೆನೊಕೊನೆಗೂ ಎಳ್ಳುಕಾಳಿನಷ್ಟು ಸುಖವ ಕಾಣೆನೊ ರಂಗಯ್ಯ ರಂಗ
ಒಡಲಿನಾಸೆಗಾಗಿ ನೊಣನು ತುಡುಕಿಬಿದ್ದು ಜೇನಕೊಡದಿ
ಮಿಡುಕುವಂತೆ ಬಾಯಿಬಿಡುವೆ ಬಿಸರುಹಾಕ್ಷನೆಬಿಡಿಸು
ಎನ್ನ ಬಂಧಪಾಶವ ಕಾಗಿನೆಲೆಯಾದಿಕೇಶವಕೊಡಿಸು ನಿನ್ನ ಭಕ್ತರ ಸಂಗವ
ಕನಕದಾಸನೊಡೆಯ ವೆಂಕಟಾದ್ರಿ ಮಾಧವ ರಂಗಯ್ಯ ರಂಗ
ಮಿಡುಕುವಂತೆ ಬಾಯಿಬಿಡುವೆ ಬಿಸರುಹಾಕ್ಷನೆಬಿಡಿಸು
ಎನ್ನ ಬಂಧಪಾಶವ ಕಾಗಿನೆಲೆಯಾದಿಕೇಶವಕೊಡಿಸು ನಿನ್ನ ಭಕ್ತರ ಸಂಗವ
ಕನಕದಾಸನೊಡೆಯ ವೆಂಕಟಾದ್ರಿ ಮಾಧವ ರಂಗಯ್ಯ ರಂಗ
0 Comments
Comment is awaiting for approval