Ticker

6/recent/ticker-posts

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ - ಚನ್ನವೀರ ಕಣವಿ

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ - ಚನ್ನವೀರ ಕಣವಿ [Ondu Munjavinali Thunturina Lyrics in Kannada]: ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ,  ಕನ್ನಡದ ಪ್ರಸಿದ್ಧ ಭಾವಗೀತೆ. ಈ ಭಾವಗೀತೆ ಯ ವಿಭಿನ್ನ ಆವೃತ್ತಿಯನ್ನು ವಿವಿಧ ಕಲಾವಿದರು ರಚಿಸಿದ್ದಾರೆ.

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಪ್ರಕಾರ: ಭಾವಗೀತೆ 
ಸಾಹಿತ್ಯ: ಚನ್ನವೀರ ಕಣವಿ
ಭಾಷೆ: ಕನ್ನಡ
ಸಂಗೀತ: 
ಗಾಯನ: 

Ondu Munjavinali Thunturina Lyrics in Kannada

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ ಎಂದು ಶ್ರುತಿ ಹಿಡಿದು ಸುರಿಯುತಿತ್ತು
ಅದಕೇ ಹಿಮ್ಮೇಳವನೆ ಸೋಸಿ ಬಹ ಸುಳಿ ಗಾಳಿ
ತೆಂಗು ಗರಿಗಳ ನಡುವೆ ನುಸುಳುತಿತ್ತು  

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಇಳಿ ಬೆಣ್ಣು ಮೈದೊಳೆದು ಮಕರಂದ ಅರಿಶಿಣದಿ
ಹೂ ಮೂಡಿದ ಮಧುಮಗಳ ಹೊಲುತಿತ್ತು
ಮೂಡಣದಿ ನೇಸರನ ನಗೆ ಮೊಗದ ಶ್ರೀಕಾಂತಿ
ಬಿಳಿಯ ಮೋಡದ ಹಿಂದೆ ಹೊಳೆಯುತಿತ್ತು
    
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಹುಲ್ಲೆಸಳು, ಹೂಪಕಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತ್ತಿತ್ತು
ಕೊರಳುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು 
   
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ತಳಿರ ತೋರಣದಲ್ಲಿ ಬಳ್ಳಿ ಮಾಡಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣ ತುಣಿತ ಹಾಕುತಿತ್ತು   

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಉಷೆಯ  ನುಂಗದಪಿನಲಿ ಹರ್ಷ ಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತಿತ್ತು
ಸೃಷ್ಟಿ ಲೀಲೆಯೊಳಿಂತು ಥಲ್ಲೀನವಾದಮನ
ಮುಂಬಾಳ ಸವಿಗನಸ ನೆನೆಯುತಿತ್ತು   

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ ಎಂದು ಶ್ರುತಿ ಹಿಡಿದು ಸುರಿಯುತಿತ್ತು
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ


Post a Comment

0 Comments