Ticker

6/recent/ticker-posts

ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ

ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ | Marulu Madikondeyalle Mayadeviye Lyrics in Kannada




ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ
ಮರುಳು ಮಾಡಿಕೊಂಡೆಯಲ್ಲ ಮಾಯಾದೇವಿಯೆ
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ

ಜ್ಞಾನಿಗಳು ನಿತ್ಯ ಪಾನಾದಿಗಳನ್ನು ಬಿಟ್ಟು
ನಾನಾ ವಿಧ ತಪವಿದ್ದರು ಧ್ಯಾನಕ್ಕೆ ಸಿಲುಕದವನ

ಸರ್ವ ಸಂಗವನು ಬಿಟ್ಟು ಸನ್ಯಾಸಿಯಾದ ಕಾಲಕ್ಕು
ಸರ್ವದಾ ತನ್ನೆದೆಯಮೇಲೇ ಬಿಡದೆ ನಿನ್ನ ಧರಿಸಿಪ್ಪಂತೆ

ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗ
ಹಲವು ಆಭರಣಗಳು ಜಲವು ಆಗಿ ಜಾಣತನದಿ

ರಂಗನು ಭೂಲೋಕದಿ ಭುಜಂಗ ಗಿರಿಯೊಳಲಮೇಲು-
ಮನ್ಗಪತಿಯಾಗಿ ನಿನ್ನ ಅಂಗೀಕರಿಸುವಂತೆ

ಮಕ್ಕಳ ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು
ಪೊಕ್ಕುಳೊಳು ಮಕ್ಕಳು ಪಡೆದು ಕಕ್ಕುಲಾತಿ ಪಡುವಂತೆ

ಎಡಕೆ ಭೂಮಿ ಬಲಕೆ ಶ್ರೀಯು ಎದುರಲ್ಲಿ ದುರ್ಗಾದೇವಿ
ತೊಡೆಯ ಮೇಲೆ ಲಕುಮಿಯಾಗಿ ಬಿಡದೆ ಮುದ್ದಾಡಿಸುವಂತೆ

ಎಂದೆಂದಿಗೂ ಮರೆಯ ನಿನ್ನಾನಂದದಿ ಜನರಿಗೆಲ್ಲ
ತಂದು ತೋರೆ ಸ್ವಾಧೀನ ಪುರಂದರ ವಿಟ್ಠಲರಾಯನ

Post a Comment

0 Comments