Ticker

6/recent/ticker-posts

Tirupati: ಕಾಲ್ತುಳಿತದಲ್ಲಿ ನಾಲ್ವರ ಸಾವು

Tirupati: ಕಾಲ್ತುಳಿತದಲ್ಲಿ ನಾಲ್ವರ ಸಾವು | 4 Killed in Tirupati stampede

ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ವೈಕುಂಠ ದ್ವಾರ ದರ್ಶನ ಟಿಕೆಟ್ ಕೇಂದ್ರದ ಬಳಿ ನೂರಾರು ಭಕ್ತರು ಟೋಕನ್ ಪಡೆಯಲು ಮುಗಿಬಿದ್ದಿದ್ದರಿಂದ ನೂಕುನುಗ್ಗಲು ಉಂಟಾಯಿತು. 


ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. "ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ" ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ತಿರುಪತಿ ದೇವಸ್ಥಾನದ ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿ (ಸಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.

Post a Comment

0 Comments